Numbers 23:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
Kannada BSI Bible 2016
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯಜ್ಞಪೀಠದ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗ ಹೋಮವಾಗಿ ಸಮರ್ಪಿಸಿದಾಗ
Kannada Bible (KNCL) BSI 2016
ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಬಲಿಪೀಠದ ಮೇಲೆ ಒಂದು ಹೋರಿಯನ್ನು ಹಾಗು ಒಂದು ಟಗರನ್ನು ದಹನಬಲಿದಾನವಾಗಿ ಸಮರ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.