Numbers 23:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: “ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’
Kannada BSI Bible 2016
ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.
Kannada Bible (KNCL) BSI 2016
ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.