Numbers 23:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”
Kannada BSI Bible 2016
ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು.
Kannada Bible (KNCL) BSI 2016
ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”