Numbers 23:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನೊಡನೆ ನಿಂತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
Kannada BSI Bible 2016
ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಳಾಮನು ಬಾಲಾಕನ ಬಳಿಗೆ ತಿರಿಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
Kannada Bible (KNCL) BSI 2016
ಬಿಳಾಮನು ಬಾಲಾಕನ ಬಳಿಗೆ ಬಂದಾಗ ತಾನು ದಹನಬಲಿಯನ್ನು ಸಮರ್ಪಿಸಿದ್ದ ಪೀಠದ ಹತ್ತಿರವೆ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರೆಲ್ಲರು ಅವನ ಬಳಿಯಲ್ಲೆ ಇದ್ದರು. ಆಗ ಬಿಳಾಮನು ಪದ್ಯರೂಪದಲ್ಲಿ ಹೀಗೆಂದು ನುಡಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.