Numbers 24:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
Kannada BSI Bible 2016
ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಿಗೆ ಶುಭವಾಗಬೇಕೆಂಬದೇ ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನನೋಡುವದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
Kannada Bible (KNCL) BSI 2016
ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.