Numbers 24:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
Kannada BSI Bible 2016
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ - ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದಿಯಲ್ಲಾ.
Kannada Bible (KNCL) BSI 2016
ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.