Numbers 24:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
Kannada BSI Bible 2016
ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಿನ್ನ ಊರಿಗೆ ಹೋಗಿಬಿಡು; ನಿನ್ನನ್ನು ಬಹಳವಾಗಿ ಘನಪಡಿಸುವೆನೆಂದು ಹೇಳಿಕೊಂಡೆನು; ಆದರೆ ನಿನಗೆ ಘನತೆಯುಂಟಾಗದಂತೆ ಯೆಹೋವನು ಅಡ್ಡಿಮಾಡಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.