Numbers 24:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
Kannada BSI Bible 2016
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.
Kannada Bible (KNCL) BSI 2016
ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.