Numbers 24:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
Kannada BSI Bible 2016
ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.
Kannada Bible (KNCL) BSI 2016
ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”