Numbers 24:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
Kannada BSI Bible 2016
ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.
Kannada Bible (KNCL) BSI 2016
ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು: