Numbers 24:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರಗಳಂತೆಯೂ ಇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
Kannada BSI Bible 2016
ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉದ್ದವಾಗಿ ಚಾಚಿಕೊಂಡಿರುವ ತಗ್ಗುಗಳಂತೆಯೂ, ನದಿಯ ಬಳಿಯಲ್ಲಿರುವ ತೋಟಗಳಂತೆಯೂ ಕಾಣಿಸುತ್ತವೆ. ಯೆಹೋವನು ನೆಟ್ಟ ಅಗರು ಮರಗಳಿಗೂ ನೀರಿನ ಬಳಿಯಲ್ಲಿರುವ ದೇವದಾರು ವೃಕ್ಷಗಳಿಗೂ ಸಮಾನವಾಗಿವೆ.
Kannada Bible (KNCL) BSI 2016
ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವು ಕಣಿವೆಗಳ ಹಾಗೆ ವಿಸ್ತರಿಸಿವೆ. ನದಿತೀರದಲ್ಲಿರುವ ತೋಟಗಳ ಹಾಗೆಯೂ, ಯೆಹೋವ ದೇವರು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.