Numbers 24:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.
Kannada BSI Bible 2016
ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.
Kannada Bible (KNCL) BSI 2016
ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.