Numbers 25:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”
Kannada BSI Bible 2016
ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಪೆಗೋರದ ಸಂಗತಿಯಲ್ಲಿಯೂ ತಮ್ಮ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ವಕುಲ ಸ್ತ್ರೀಯ ಸಂಗತಿಯಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದರಲ್ಲಾ. (ಆ ಸ್ತ್ರೀಯು ಪೆಗೋರದ ಸಂಗತಿಯಿಂದ ಘೋರ ವ್ಯಾಧಿಯುಂಟಾದಾಗ ಹತವಾದಳು.)
Kannada Bible (KNCL) BSI 2016
ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.