Numbers 25:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.
Kannada Bible (KNCL) BSI 2016
ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”