Numbers 25:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು, ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನೂ ಪ್ರೋತ್ಸಾಹಿಸಿದವರನ್ನು ಕಂಡುಹಿಡಿದು ನೀವು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೋಶೆ ಇಸ್ರಾಯೇಲ್ಯರ ನ್ಯಾಯಾಧಿಪತಿಗಳಿಗೆ - ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳನಿಗೆ ಸೇರಿಕೊಂಡ ತನ್ನ ತನ್ನ ವಶದಲ್ಲಿರುವವರಿಗೆ ಪ್ರಾಣ ಶಿಕ್ಷೆಯನ್ನು ನಡಿಸಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.