Numbers 25:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
Kannada BSI Bible 2016
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್‌ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.
Kannada Bible (KNCL) BSI 2016
ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.