Numbers 26:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
Kannada BSI Bible 2016
ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಿಸಿದರು. [ಅದರ ವಿವರ ಹೇಗಂದರೆ - ]
Kannada Bible (KNCL) BSI 2016
ಸರ್ವೇಶ್ವರ ಮೋಶೆಗೂ ಈಜಿಪ್ಟಿನಿಂದ ಬಂದಿದ್ದ ಇಸ್ರಯೇಲರಿಗೂ ಆಜ್ಞಾಪಿಸಿದ್ದಂತೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ಇಸ್ರಯೇಲರನ್ನು ಲೆಕ್ಕಿಸಿದರು: ಅದರ ವಿವರ ಇದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು: