Numbers 26:62 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
Kannada BSI Bible 2016
ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಇಸ್ರಾಯೇಲ್ಯರಿಗೆ ಸ್ವಾಸ್ತ್ಯದೊರಕಿದಂತೆ ಲೇವಿಯರಿಗೆ ಸ್ವಾಸ್ತ್ಯದೊರೆಯದೆ ಹೋದದರಿಂದ ಅವರು ಇಸ್ರಾಯೇಲ್ಯರೊಡನೆ ಲೆಕ್ಕಿಸಲ್ಪಡಲಿಲ್ಲ. ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ 23,000.
Kannada Bible (KNCL) BSI 2016
ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ: 23,000 ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.