Numbers 26:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
Kannada BSI Bible 2016
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
Kannada Bible (KNCL) BSI 2016
ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.