Numbers 26:9 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
Kannada BSI Bible 2016
ಎಲೀಯಾ ಬನ ಕುಮಾರರು: ನೆಮೂವೇಲ್‌, ದಾತಾನ್‌, ಅಬೀ ರಾಮ್‌; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
Kannada Bible (KNCL) BSI 2016
ಎಲೀಯಾಬನ ಮಕ್ಕಳು ಇವರು - ನೆಮೂವೇಲ್, ದಾತಾನ್ ಮತ್ತು ಅಬೀರಾಮ್, ಕೋರಹನ ಪಂಗಡದವರು ಸರ್ವೇಶ್ವರನಿಗೆ ವಿರುದ್ಧ ವಾದಿಸಿದ ಕಾಲದಲ್ಲಿ ಅವರೊಂದಿಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧ ಪ್ರತಿಭಟಿಸಿದ ಆಲೋಚನಾಕರ್ತರು ದಾತಾನ್ ಮತ್ತು ಅಬೀರಾಮ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.