Numbers 27:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಲ್ಪಹಾದನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಹಾದನಿಗೆ ಐದುಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.
Kannada BSI Bible 2016
ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾಎಂಬವರು ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವದಕ್ಕೆ ಬಂದರು.
Kannada Bible (KNCL) BSI 2016
ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.