Numbers 27:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನು ಬದ್ಧವಾದ ವಿಧಿಯಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಕೊಡಬೇಕು; ಇವನೇ ಅದನ್ನು ಅನುಭೋಗಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲ್ಯರಿಗೆ ನ್ಯಾಯವಿಧಿಯಾಗಿರಬೇಕು.
Kannada Bible (KNCL) BSI 2016
ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು.