Numbers 27:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು. “ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
Kannada BSI Bible 2016
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
Kannada Bible (KNCL) BSI 2016
ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.