Numbers 27:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
Kannada BSI Bible 2016
ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರು ಇವರೆಲ್ಲರ ಮುಂದೆ ನಿಂತು ಅವರಿಗೆ -
Kannada Bible (KNCL) BSI 2016
ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,