Numbers 27:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.
Kannada BSI Bible 2016
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿ
Kannada Bible (KNCL) BSI 2016
ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ,