Numbers 27:7 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.
Kannada BSI Bible 2016
ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
Kannada Bible (KNCL) BSI 2016
ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು.