Numbers 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,