Numbers 28:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
Kannada BSI Bible 2016
ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಟಗರಿಗೆ ಆರು ಸೇರೂ ಕುರಿಯೊಂದಕ್ಕೆ ಮೂರು ಸೇರೂ ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮವಾಗಿರುವದು.
Kannada Bible (KNCL) BSI 2016
ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.