Numbers 28:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
Kannada BSI Bible 2016
ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು;
Kannada Bible (KNCL) BSI 2016
ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.