Numbers 28:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಈ ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
Kannada BSI Bible 2016
ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಗಳನ್ನೂ ಸಮರ್ಪಿಸಬೇಕು; ಈ ಪಶುಗಳು ಪೂರ್ಣಾಂಗವಾಗಿಯೇ ಇರಬೇಕು.
Kannada Bible (KNCL) BSI 2016
ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.