Numbers 28:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
Kannada BSI Bible 2016
ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.
Kannada Bible (KNCL) BSI 2016
“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’