Numbers 28:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
Kannada BSI Bible 2016
ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
Kannada Bible (KNCL) BSI 2016
‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.