Numbers 28:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಒಂದು ಕುರಿಮರಿಯನ್ನು ಹೊತ್ತಾರೆಯಲ್ಲಿಯೂ ಇನ್ನೊಂದನ್ನು ನಸುಸಂಜೆಯಲ್ಲಿಯೂ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.
Kannada BSI Bible 2016
ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದಿನಂಪ್ರತಿಯೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಹೊತ್ತಾರೆಯಲ್ಲಿ ಒಂದು ಕುರಿಯನ್ನೂ ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಅಂತು ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನು ಸಮರ್ಪಿಸಬೇಕು.
Kannada Bible (KNCL) BSI 2016
‘ಪ್ರತಿದಿನ ನೀವು ಸರ್ವೇಶ್ವರನಿಗೆ ದಹನಬಲಿಗಾಗಿ ಬೆಳಿಗ್ಗೆ ಒಂದು ಕುರಿ, ಸಂಜೆ ಒಂದು ಕುರಿ ಹೀಗೆ ಎರಡು ಕಳಂಕರಹಿತವಾದ ಒಂದು ವರ್ಷದ ಕುರಿಗಳನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.