Numbers 28:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯಸಮರ್ಪಣೆಗಾಗಿ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
Kannada BSI Bible 2016
ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.
Kannada Bible (KNCL) BSI 2016
ಬೆಳಿಗ್ಗೆ ಆ ಕುರಿಯೊಂದಿಗೆ ಧಾನ್ಯ ನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನು ಮತ್ತು ಮೂರು ಸೇರು ಗೋದಿಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.