Numbers 28:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.” ಸಬ್ಬತ್ತಿನ ಸಮರ್ಪಣೆಗಳುನು, ಲ್ಲವೆಂದು ನಿನಗೆ ತಿಳಿದದೆ’ೂ ಹಿಗ್ನ ಮೇಲೆ ೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಈಗಲೇ ಲು ಸಾಧ್ಯವಿಲ್ಲೂತೆ ಇಬ್ಬರು ಆಳುಗಳಿದ್ದರು. ುದ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.
Kannada BSI Bible 2016
ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು.
Kannada Bible (KNCL) BSI 2016
ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.