Numbers 28:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.” (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
Kannada BSI Bible 2016
ಆದರೆ ಸಬ್ಬತ್‌ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮವು, ಅದಕ್ಕೆ ಸೇರಿದ ಪಾನದ್ರವ್ಯವು ಇವುಗಳನ್ನಲ್ಲದೆ ನೀವು ಸಬ್ಬತ್‍ದಿನದಲ್ಲಿ ಹೆಚ್ಚಾಗಿ ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಗೋದಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.
Kannada Bible (KNCL) BSI 2016
‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.