Numbers 29:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
Kannada BSI Bible 2016
ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
Kannada Bible (KNCL) BSI 2016
‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.