Numbers 29:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
Kannada BSI Bible 2016
ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕಯಜ್ಞ, ನಿತ್ಯಸರ್ವಾಂಗಹೋಮ, ಇದರ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳು ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
Kannada Bible (KNCL) BSI 2016
ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.