Numbers 29:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
Kannada BSI Bible 2016
ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ [ಸರ್ವಾಂಗಹೋಮಕ್ಕಾಗಿ] ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;
Kannada Bible (KNCL) BSI 2016
ಆ ಹಬ್ಬದ ಎರಡನೆಯ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಹನ್ನೆರಡು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು ಇವುಗಳನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,