Numbers 29:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
Kannada BSI Bible 2016
ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;
Kannada Bible (KNCL) BSI 2016
‘ಐದನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಒಂಬತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಅರ್ಪಿಸಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಐದನೆಯ ದಿವಸದಲ್ಲಿ ದೋಷವಿಲ್ಲದ ಒಂಬತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,