Numbers 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕೋದ್ಯೋಗವನ್ನು ನಡಿಸುವದಕ್ಕೆ ಆರೋನನನ್ನೂ ಅವನ ಮಕ್ಕಳನ್ನೂ ನೇವಿುಸಬೇಕು. ಇತರನು ಆ ಕೆಲಸಕ್ಕೆ ಕೈಹಾಕಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಆರೋನನನ್ನು ಹಾಗೂ ಅವನ ಮಕ್ಕಳನ್ನು ನೇಮಿಸು. ಬೇರೆ ಯಾರಾದರು ಆ ವೃತ್ತಿಗೆ ಕೈ ಹಾಕಿದರೆ ಅಂಥವನಿಗೆ ಮರಣ ಶಿಕ್ಷೆಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”