Numbers 3:12 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ಪ್ರತಿ ಕುಟುಂಬವು ತನ್ನ ಚೊಚ್ಚಲ ಮಗನನ್ನು ನನಗೆ ಕೊಡಬೇಕೆಂದು ನಿನಗೆ ಹೇಳಿದ್ದೆ. ಆದರೆ ನನ್ನ ಸೇವೆಮಾಡುವುದಕ್ಕೆ ಈಗ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನನ್ನವರಾಗಿರುವರು. ಆದ್ದರಿಂದ ಬೇರೆ ಎಲ್ಲಾ ಇಸ್ರೇಲರು ತಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಕೊಡಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.
Kannada BSI Bible 2016
ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
Kannada Bible (KNCL) BSI 2016
“ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.