Numbers 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಲೇವಿಯರನ್ನು ಅವರ ಕುಟುಂಬಗಳಿಗನುಗುಣವಾಗಿಯೂ ಗೋತ್ರಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ಪಟ್ಟ ಪ್ರತಿಯೊಬ್ಬ ಗಂಡುಮಗುವನ್ನೂ ಲೆಕ್ಕಿಸು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಲೇವಿಯರಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕೆಂದು ಆಜ್ಞಾಪಿಸಲಾಗಿ
Kannada Bible (KNCL) BSI 2016
“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.