Numbers 3:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದರ್ಶನಗುಡಾರದಲ್ಲಿ ಪವಿತ್ರ ಗುಡಾರವನ್ನು, ಹೊರಡೇರೆಯನ್ನು ಮತ್ತು ಅದರ ಮೇಲ್ಹೊದಿಕೆಯನ್ನು ನೋಡಿಕೊಳ್ಳವುದು ಗೇರ್ಷೋನ ವಂಶದವರ ಕೆಲಸವಾಗಿತ್ತು. ಇದಲ್ಲದೆ ಅವರು ಅಂಗಳದ ಪರದೆಯನ್ನೂ ನೋಡಿಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,
Kannada BSI Bible 2016
ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಗೇರ್ಷೋನನ ವಂಶದವರು ಕಾಪಾಡಬೇಕಾದವುಗಳು ಯಾವವಂದರೆ - ಗುಡಾರವೂ ಅದರ ಮೇಲಣ ಡೇರೆಯ ಬಟ್ಟೆಯೂ ಅದರ ಮೇಲ್ಹೊದಿಕೆಯೂ ದೇವದರ್ಶನದ ಗುಡಾರದ ಬಾಗಲಲ್ಲಿರುವ ಪರದೆಯೂ
Kannada Bible (KNCL) BSI 2016
ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಗುಡಾರ, ಅದರ ಮೇಲಿದ್ದ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,