Numbers 3:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 8,300 ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.
Kannada BSI Bible 2016
ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ದೇವಸ್ಥಾನವನ್ನು ಕಾಯತಕ್ಕವರು ಅಂದರೆ ಒಂದು ತಿಂಗಳು ಮೊದಲುಗೊಡು ಹೆಚ್ಚಾದ ವಯಸ್ಸುಳ್ಳ ಗಂಡಸರು 8600 ಮಂದಿ.
Kannada Bible (KNCL) BSI 2016
ಅವರಲ್ಲಿ ದೇವಸ್ಥಾನ ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 8,600:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು.