Numbers 3:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,
Kannada BSI Bible 2016
ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆರಾರೀ ವಂಶದವರ ವಶಕ್ಕೆ ಕೊಟ್ಟವುಗಳು ಯಾವವಂದರೆ - ಗುಡಾರದ ಚೌಕಟ್ಟುಗಳೂ ಅಗುಳಿಗಳೂ ಕಂಬಗಳೂ ಗದ್ದಿಗೇಕಲ್ಲುಗಳೂ ಇವುಗಳ ಉಪಕರಣಗಳೂ
Kannada Bible (KNCL) BSI 2016
ಮೇರಾರೀ ವಂಶದವರ ವಶಕ್ಕೆ ಒಪ್ಪಿಸಲಾಗಿದ್ದವುಗಳು ಇವು - ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ