Numbers 3:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.
Kannada BSI Bible 2016
ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಗಳದ ಸುತ್ತಲಿರುವ ಕಂಬಗಳೂ ಅವುಗಳ ಗದ್ದಿಗೇ ಕಲ್ಲುಗಳೂ ಗೂಟಗಳೂ ಹಗ್ಗಗಳೂ ಇವುಗಳೇ. ಇವುಗಳ ಸಕಲ ವಿಧವಾದ ಪರಿಚರ್ಯವನ್ನು ಇವರೇ ಮಾಡಬೇಕು.
Kannada Bible (KNCL) BSI 2016
ಇವುಗಳ ಉಪಕರಣಗಳು, ಅಂಗಳದ ಸುತ್ತಲಿದ್ದ ಕಂಬಗಳು, ಅವುಗಳ ಗದ್ದಿಗೆ ಕಲ್ಲುಗಳು, ಗೂಟಗಳು ಮತ್ತು ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಇವರೇ ಮಾಡಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.