Numbers 3:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.
Kannada BSI Bible 2016
ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.
Kannada Bible (KNCL) BSI 2016
ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.