Numbers 3:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಲೇವಿಯರಲ್ಲಿದ್ದ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಎಲ್ಲಾ ಗಂಡಸರನ್ನು ಮತ್ತು ಗಂಡುಮಕ್ಕಳನ್ನು ಅವರ ಗೋತ್ರಗಳಿಗನುಸಾರವಾಗಿ ಲೆಕ್ಕಿಸಬೇಕೆಂದು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದನು. ಅವರ ಒಟ್ಟು ಸಂಖ್ಯೆ 22,000.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.
Kannada BSI Bible 2016
ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಸರ್ವೇಶ್ವರನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಎಣಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,000:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ.