Numbers 3:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ನೀನು ಇಸ್ರೇಲರ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರನ್ನು ಲೆಕ್ಕಿಸು. ಅವರ ಹೆಸರುಗಳ ಪಟ್ಟಿಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನು ಮೋಶೆಗೆ, “ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.
Kannada BSI Bible 2016
ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ಮೋಶೆಗೆ - ನೀನು ಇಸ್ರಾಯೇಲ್ಯರಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರುಹಿಡಿದು ಲೆಕ್ಕಿಸು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ, “ನೀನು ಇಸ್ರಯೇಲರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಜೇಷ್ಠಪುತ್ರರನ್ನು ಹೆಸರು ಹಿಡಿದು ಎಣಿಕೆಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.